ಶೀರ್ಷಿಕೆ ಓದಿದಾಗ ಆಶ್ವರ್ಯ-ಪ್ರಶ್ನಾರ್ಥಕ ಭಾವಗಳು ಮೂಡುವುದು ಸಹಜ. ಆದರೆ ‘ಕನ್ನಡದ ಕತ್ತು ಹಿಚುಕುತ್ತಿರುವ ಕೇರಳ ಸರಕಾರ ಎನ್ನುವುದು ಅಕ್ಷರಶಃ ಸತ್ಯ. ಗಡಿ ಅಂಚಿನ ಕಾಸರಗೋಡಿನಿಂದ ಕನ್ನಡಕ್ಕೆ ಸ್ಥಾನವೇ ಇಲ್ಲದಂತೆ ಮಾಡುವ ನಿಟ್ಟಿನಲ್ಲಿ ಆ ಸರಕಾರ ನಾನಾ ಬಗೆಯ ತಂತ್ರಗಾರಿಕೆಯನ್ನು ಮಾಡುತ್ತಲೇ ಬಂದಿದೆ. ಭಾಷಾವಾರು ಪ್ರಾಂತ್ಯ ರಚನೆಯಾಗಿ 54 ವರ್ಷ ಸಂದರೂ ಕಾಸರಗೋಡಿನಲ್ಲಿ ಕನ್ನಡ ಉಳಿದಿರುವುದನ್ನು ಕಂಡು ಈ ಬಾರಿ ಪ್ರಬಲ ಅಸ್ತ್ತ ಪ್ರಯೋಗಿಸಿದೆ. ಇದಕ್ಕೆ ತಕ್ಕ ಪ್ರತ್ಯಸ್ತ್ರ ಹೂಡದೇ ಇದ್ದರೆ ಸಂಭವಿಸುವ ಅಪಾಯಗಳು ಅನೇಕ. ಅವುಗಳೇನು…..? ಬದಿಯಡ್ಕ ಶಾಲಾ ಮಕ್ಕಳು 2011ರ ಜುಲೈ 8 ರಿಂದ 17ರವರೆಗೆ ಕೇರಳದಲ್ಲಿನ ಕನ್ನಡ ಪ್ರಾಂತ್ಯಗಳಾದ ಕಾಸರಗೋಡು-ಹೊಸದುರ್ಗಗಳಲ್ಲಿ ಕ್ಷೇತ್ರ ಪ್ರವಾಸದಲ್ಲಿದ್ದೆ. ಎಂದಿನಂತೆ ಕನ್ನಡ ಭಾಷಾ ಚಳವಳಿಗಾರನ್ನು ಭೇಟಿಯಾದೆ. ‘ಕನ್ನಡಕ್ಕೆ ಭಾರಿ ಅಪಾಯ ತಂದೊಡ್ಡುವ ಕ್ರಮವನ್ನು ಕೇರಳ ಸರಕಾರ ಜರುಗಿಸಿದೆ. ಇದರಿಂದ ಕಾಸರಗೋಡಿನ ಕನ್ನಡದ ಕತ್ತು ಹಿಚುಕಿದಂತಾಗುತ್ತದೆ. ಕೆಲವೇ ವರ್ಷಗಳಲ್ಲಿ ಇಲ್ಲಿನ ಕನ್ನಡ ಸಂಸ್ಕೃತಿ ಕಣ್ಮರೆಯಾಗಲಿದೆ ಎಂಬ ಆತಂಕವನ್ನು ಮುಳ್ಳೇರಿಯಾದ ಆಯುರ್ವೇದ ವೈದ್ಯ ನರೇಶ್ ಮತ್ತು ಕಾಸರಗೋಡಿನ ಸರಕಾರಿ ಕಾಲೇಜಿನ ಕನ್ನಡ ಸಹ ಪ್ರಾಧ್ಯಾಪಕ ರತ್ನಕರ ಮಲ್ಲಮೂಲೆ ಅವರು ವ್ಯಕ್ತಪಡಿಸಿದರು. ಕನ್ನಡ ಭಾಷಾ ಶಾಲೆಗಳಲ್ಲಿ 10ನೇ ತರಗತಿವರೆಗೆ ಎರಡನೇ ಭಾಷೆಯಾಗಿ ಮಲೆಯಾಳಂ ಕಲಿಸಬೇಕು-ಕಲ...